ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರು ನೀಡಿರುವ ದೂರಿನ ಮೇರೆಗೆ ಪ್ರಜ್ವಲ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.
ಮೇ.17 ರಂದು ವಾಟ್ಸಾಪ್ ಗ್ರೂಪ್ ವೊಂದರಲ್ಲಿ /ಫೇಸ್ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಸಾಮಾಜಿಕ ಜಾಲತಾಣದ ಮುಖಾಂತರ ರೋಡಿನಲ್ಲಿ “ಕಲ್ಲೇಟು ಬೀಳುವುದು ಖಚಿತ ” ಎಂಬುದಾಗಿ ಜೀವ ಬೆದರಿಕೆಯನ್ನು ಹಾಕಿರುತ್ತಾನೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಐಪಿಸಿ 1860 (U/S- 504,506) ರಂತೆ ಪ್ರಕರಣ ದಾಖಲಾಗಿದೆ.