ಪುತ್ತೂರು : ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿಯಾದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ.

ಪಾಣಾಜೆ-ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಪಾಣಾಜೆ ಕಡೆಯಿಂದ ಬಂದ ಕಾರು ಬ್ರೇಕ್ ಫೇಲ್ ಆದ ಹಿನ್ನೆಲೆ ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಅಧಿಕ ಬೈಕ್ ಗಳಿಗೆ ಡಿಕ್ಕಿಯಾಗಿದ್ದು, ಘಟನೆಯಿಂದಾಗಿ ಬೈಕ್ ಗಳು ನಜ್ಜುಗುಜ್ಜಾಗಿವೆ.

ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

























