ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳೊಂದಿಗೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಮುಖಕ್ಕೆ ಆತನ ಮದುವೆಯ ದಿನವೇ ಪ್ರೇಯಸಿ ಆ್ಯಸಿಡ್ ಎರಚಿದ ಘಟನೆ ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಯುವಕನ ಮುಖದ ಮೇಲೆ ಆ್ಯಸಿಡ್ ಬಿದ್ದ ಪರಿಣಾಮ ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿರುವುದಾಗಿ ತಿಳಿದುಬಂದಿದೆ. ತಕ್ಷಣ ಕುಟುಂಬಸ್ಥರು ವರನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯ ಮಹಿಳೆಯರು ಯುವತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.


























