ಮಂಗಳೂರು : ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕುರಿತು ಶರಣ್ ಪಂಪ್ವೆಲ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
sharan pumpwell mangalore ಎಂಬ ಫೇಸ್ಬುಕ್ ಖಾತೆಯಲ್ಲಿ ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶ ಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಬರೆದು ಪೋಸ್ಟ್ ಮಾಡಿದ್ದು, ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಎಚ್ಚರಿಕೆಯನ್ನು ನೀಡಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಕ್ರ ಸಂ.74/2024 ಕಲಂ 153(ಎ) 506 ಭಾದಸಂ ರಂತೆ ದಾಖಲಾಗಿರುತ್ತದೆ.
ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ಬಿ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎ.ಸಿ.ಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

























