ಕೇರಳ : ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಬಂಧಿಸಲಾಗಿದೆ.
ಸುರಭಿ ಖಾತುನ್ ಬಂಧಿತ ಗಗನಸಖಿ.
ಯಾಕೆ ಅರೆಸ್ಟ್ ಮಾಡಿದ್ದಾರೆ.!?
ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಗುದನಾಳದಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನವನ್ನು ಅಕ್ರಮವಾಗಿ ಮುಚ್ಚಿಟ್ಟುಕೊಂಡು ಪ್ಲೈಟ್ ಏರಿದ್ದರು ಎಂದು ಡಿಆರ್ಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುರಭಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ.28 ರಂದು ಮಸ್ಕತ್ನಿಂದ ಕಣ್ಣೂರಿಗೆ ಬಂದಿಳಿದ ವಿಮಾನದಲ್ಲಿ ಸುರಭಿ ಕ್ಯಾಬಿನ್ ಸಿಬ್ಬಂದಿ ಆಗಿದ್ದರು. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಸುರಭಿ ಖತುನ್ರನ್ನು ಬಂಧಿಸಿದ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಸ್ಟಡಿಗೆ ನೀಡಲಾಗಿದೆ. ವರದಿಗಳ ಪ್ರಕಾರ ಇವರು ಹಲವು ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂದು ತಿಳಿದುಬಂದಿದೆ.