ಪುತ್ತೂರು : ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಆಕ್ಟಿವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಬಳಿ ನಡೆದಿದೆ.

ಪಡೀಲಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಹಠಾತ್ ರಸ್ತೆಯ ಎಡ ಬದಿಗೆ ಬಂದು, ರಸ್ತೆಯ ಬದಿಯ ಮಣ್ಣಿನ ರಾಶಿ ಮೇಲೆ ಚಲಿಸಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಚಾಲಕ ಮುಂಭಾಗದಲ್ಲಿ ಸಾಗುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಆಕ್ಟಿವಾ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.