ಪುತ್ತೂರು : ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಜರುಗಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ, ಮುಖ್ಯ ಅತಿಥಿಯಾದ ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ಸಂಚಾಲಕರಾದ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ, ಪ್ರಸನ್ನ ಭಟ್, ಅಶೋಕ್ ಪುತ್ತಿಲ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಅತಿಥಿಯಾದ ಹಾಗೂ ರಕ್ಷಕ ಶಿಕ್ಷಕ ಸಂಘ ದ ಅಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಧನಾತ್ಮಕ ಅಂಶಗಳನ್ನು ಹೆಚ್ಚಿಸಿ ಪರಿಪೂರ್ಣತೆಯನ್ನು ಸಾಧಿಸುವ ಪ್ರಯತ್ನ ಮಾಡುವುದು ಎಂದರು.

ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ಮಾತುಗಳೊಂದಿಗೆ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿದರು. ನಂತರ ಆರತಿ ಬೆಳಗಿ ತಿಲಕವಿಡುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಸ್ವಾಗತ ಮಾಡಲಾಯಿತು.

ಸಂಚಾಲಕರು ಮಾತನಾಡಿ, ಸಮಾಜಕ್ಕೆ ಹಾಗೂ ಕುಟುಂಬಕ್ಕೆ ತೊಂದರೆಯಾಗದಂತೆ ಹಾಗೆ ಬೆಳೆಸುವ ಗುರಿಯನ್ನು ಸಾಂದೀಪನಿ ಶಾಲೆ ಇಟ್ಟುಕೊಂಡಿದ್ದು, ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಜೆಗಳಾಗಿ ಇನ್ನೊಬ್ಬರಿಗೆ ಸಹಾಯಹಸ್ತರಾಗಿ ಬಾಳಿ ಎಂದು ಆಶೀರ್ವದಿಸಿದರು.

ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ರವರು ಮಾತನಾಡಿ, ಪೋಷಕರಿಗೆ ಸಾರ್ಥಕವಾಗುವ ಹಾಗೆ ವಿದ್ಯಾರ್ಥಿಗಳು ಬೆಳೆಯಬೇಕೆಂದು ಉತ್ತಮ ಅಂಕಗಳನ್ನು ಪಡೆದು ಸುಸಂಸ್ಕೃತ ಮಕ್ಕಳಾಗಿ ಬಾಳಿ ಎಂದು ಆಶೀರ್ವದಿಸಿದರು.
ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣ ಪ್ರಸಾದ್ ಕೆದಿಲಯ ಎಲ್ಲರನ್ನೂ ಸ್ವಾಗತಿಸಿದರು. ನೀತು ನಾಯಕ್ ಧನ್ಯವಾದಗೈದರು.