ಬೆಳ್ತಂಗಡಿ : ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಸಮೀಪದ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಟಿಪ್ಪರ್ ರಿವರ್ಸ್ ತೆಗೆಯುವ ವೇಳೆ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈ ವೇಳೆ ಯುವಕ ಮೃತಪಟ್ಟಿದ್ದ ಎಂದು ವರದಿಯಾಗಿದೆ.