ಪುತ್ತೂರು : ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಸೋಮವಾರದ ಸಂತೆ ವ್ಯಾಪಾರನ್ನು ನಿಷೇಧಿಸಿ ನಗರ ಸಭಾ ಪೌರಾಯುಕ್ತ ಬದ್ರುದ್ದೀನ್ ಸೌದಾಗರ ಆದೇಶಿಸಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪರಿಷತ್ ಚುನಾವಣೆಗೆ ಪುತ್ತೂರು ತಾ.ಪಂ ಕಟ್ಟಡ ಹಾಗೂ ತಾಲೂಕು ಆಡಳಿತ ಸೌಧದಲ್ಲಿ ತೆರೆಯಲಾಗಿರುವ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗಳು ನಡೆಯಲಿದೆ.
ಈ ಹಿನ್ನೆಯಲ್ಲಿ ಮತದಾನ ಪ್ರಕ್ರಿಯೆಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜೂ.3ರ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದ್ದು, ಕಿಲ್ಲೆ ಮೈದಾನ ಹಾಗೂ ಸುತ್ತಮುತ್ತ ರಸ್ತೆ ಬದಿಯಲ್ಲಿ ಸಂತೆ ವ್ಯಾಪಾರವನ್ನು ನಿಷೇಧಿಸಿ ಆದೇಶಿಸಿದ್ದಾರೆ.