ಪುತ್ತೂರು : ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಾಲ್ಮರ ಸಮೀಪ ನಡೆದಿದೆ.

ಸಾಲ್ಮರ ಎಸ್.ಎಂ. ಸರ್ಕಲ್ ಬಳಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ ಎಂದು ವರದಿಯಾಗಿದೆ.
ಅಪಘಾತದಲ್ಲಿ ಎರಡೂ ಕಾರುಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

























