ಮಂಗಳೂರು : ಕಂಕನಾಡಿ ಬಳಿ ಅನುಮತಿ ರಹಿತ ನಮಾಜ್ ಮಾಡಿದ ಪ್ರಕರಣಕ್ಕೆ ಹಾಕಿದ ‘ಬಿ’ ರಿಪೋರ್ಟ್ ರದ್ದು ಪಡಿಸಲು ಮತ್ತು ಕರ್ನಾಟಕ ಸರಕಾರ ದ್ವೇಷ ರಾಜಕಾರಣ ಮಾಡಿ ಹಿಂದೂ ಮುಖಂಡ ಶರಣ್ ಪಂಪ್ವೆಲ್ ರನ್ನು ಗುರಿಯಾಗಿಸಿ ದಾಖಲಿಸಿದ ಪ್ರಕರಣ ವಾಪಾಸ್ ಪಡೆಯುವಂತೆ ಹಾಗೂ ಆ ಪ್ರಕರಣದಲ್ಲಿ ಕಡ್ಡಾಯ ರಜೆಯಲ್ಲಿ ಕಳುಹಿಸಿದ ಪೊಲೀಸ್ ಅಧಿಕಾರಿಯ ಕಡ್ಡಾಯ ರಜೆ ರದ್ದುಪಡಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರಿಗೆ ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷರಾದ ಎಚ್.ಕೆ ಪುರುಷೋತ್ತಮ, ಪ್ರಾಂತ ಸಹಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಹಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ ಈ ವೇಳೆ ಉಪಸ್ಥಿತರಿದ್ದರು.


























