ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಎನ್.ಐ.ಎ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ.
ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ.
ಕಳೆದ ತಿಂಗಳಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ 4ನೇ ಆರೋಪಿಯನ್ನು ಬಂಧಿಸಲಾಗಿತ್ತು. ಸುಳ್ಯದ ಶಾಂತಿ ನಗರ ನಿವಾಸಿಯಾಗಿದ್ದ ಮುಸ್ತಫಾ ಪೈಚಾರ್ನನ್ನು ಅರೆಸ್ಟ್ ಮಾಡಲಾಗಿತ್ತು.
ಈತ ಪ್ರವೀಣ್ ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದನು. ಎನ್.ಐ.ಎ ತಂಡ ಈತನಿಗಾಗಿ ಹುಡುಕಾಡಿ ಕೊನೆಗೆ ಹಾಸನದ ಸಕಲೇಶಪುರ ಬಳಿ ಆತನನ್ನು ಅರೆಸ್ಟ್ ಮಾಡಲಾಗಿತ್ತು.
ರಿಯಾಜ್ ಯೂಸಫ್ ಹಾರಳ್ಳಿಯನ್ನ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.


























