ಪುತ್ತೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆ ಕಾಣಲಿದೆ. ಚಿತ್ರದ ಪ್ರೀಮಿಯರ್ ಶೋ ನಾಳೆ (ಜೂ.07) ಪುತ್ತೂರಿನ ಭಾರತ್ ಸಿನೆಮಾಸ್ ನಲ್ಲಿ ನಡೆಯಲಿದೆ.

ಪುತ್ತೂರಿನ ಜಿ.ಎಲ್. ವನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ರಾತ್ರಿ 7 ಗಂಟೆಗೆ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ.

ಪುತ್ತೂರಿನ ಭಾರತ್ ಸಿನೆಮಾಸ್ ನಲ್ಲಿ ಏಕಕಾಲದಲ್ಲಿ ಎರಡು ಸ್ಕ್ರೀನ್ ಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಸ್ಕ್ರೀನ್ 2,3 ರಲ್ಲಿ ಪ್ರೀಮಿಯರ್ ಶೋ ನಡೆಯಲಿದ್ದು, ಈಗಾಗಲೇ ಹೆಚ್ಚಿನ ಮಟ್ಟದಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ.
ಆಕ್ಷನ್, ಹಾಸ್ಯ, ಗಂಭೀರತೆ, ಉತ್ತಮ ಸಂಗೀತವನ್ನು ಸಿನಿಮಾ ಒಳಗೊಂಡಿದ್ದು, ಕುಟುಂಬ ಸಮೇತರಾಗಿ ವೀಕ್ಷಣೆ ಮಾಡಬಹುದಾಗಿದೆ.
ತುಡರ್ ಸಿನಿಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದ್ದು, ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾರ್ಥ್ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಚಲನಚಿತ್ರವು ಪ್ರತಿಭಾವಂತ ತಂಡವನ್ನು ಹೊಂದಿದೆ. ವಿಲ್ಸನ್ ರೆಬೆಲ್ಲೊ ನಿರ್ಮಾಪಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಸಹ-ನಿರ್ಮಾಪಕರಾದ ಹರೀಶ್ ಶೆಟ್ಟಿ ಮತ್ತು ವಿದ್ಯಾ ಸಂಪತ್ ಕರ್ಕೇರಾ ಬೆಂಬಲ ನೀಡಿದ್ದಾರೆ. ತೇಜಸ್ ಪೂಜಾರಿ ಮತ್ತು ಎಲ್ಟನ್ ಮಸ್ಕರೇನ್ಹಸ್ ಚಿತ್ರದ ನಿರ್ದೇಶಕರು.
ಕಥೆ, ಚಿತ್ರ ಕಥೆ, ಸಂಭಾಷಣೆ ಸಾಹಿತ್ಯ : ಮೋಹನ್ ರಾಜ್, ಸಂಗೀತ : ಪ್ಯಾಟ್ಟ್ಸನ್ ಪಿರೇರಾ, ಸಾಯೀಶ್ ಭಾರದ್ವಾಜ್, ಛಾಯಾಗ್ರಹಣ : ಚಂತೂ ಮೆಪ್ಪಯುರು, ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನೃತ್ಯ ಸಂಯೋಜಕ ವಿಜೇತ್ ಆರ್. ನಾಯಕ್, ಸಂಕಲನ : ಗಣೇಶ್ ನೀರ್ಚಾಲ್ , ಪ್ರಚಾರ ವಿನ್ಯಾಸ : ದೇವಿ ವಹಿಸಿಕೊಂಡಿದ್ದಾರೆ.
ತಾರಾಗಣದಲ್ಲಿ ಸಿದ್ಧಾರ್ಥ್ ಎಚ್ ಶೆಟ್ಟಿ, ದೀಕ್ಷಾ ಭಿಷೇ, ಅರವಿಂದ ಬೋಳಾರ್, ರೂಪ ವರ್ಕಾಡಿ, ಸದಾಶಿವ ಅಮೀನ್, ನಮಿತಾ ಕೂಳೂರು, ಎಲ್ಟನ್ ಮಶ್ಚರೇನ್ಹಸ್, ವಿಕಾಸ್ ಪುತ್ರನ್, ಪ್ರಜ್ವಲ್ ಶೆಟ್ಟಿ, ಹರ್ಷಿತಾ ಶೆಟ್ಟಿ, ರಾಧೇಶ್ ಶೆಣೈ ಅನ್ವಿತಾ ಸಾಗರ್, ಜಯಶೀಲ, ಉಮೇಶ್ ಮಿಜಾರ್, ಅಶೋಕ್ ಕುಮಾರ್ , ಉದಯ ಪೂಜಾರಿ, ಮೋಹನ್ ರಾಜ್ ಇದ್ದಾರೆ.

























