ಮಂಗಳೂರು : ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18), ಹಫೀಝ್(24) ಬಂಧಿತರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಎಂಬಲ್ಲಿ ಭಾರತ್ ಮಾತಕೀ ಜೈ ಘೋಷಣೆ ಕೂಗಿದ ವಿಚಾರಕ್ಕೆ ಚೂರಿ ಇರಿಯಲಾಗಿತ್ತು. ಹರೀಶ್ ಮತ್ತು ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು.
ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪ : ದೂರು
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲಾ ರಿಂದ ಪೊಲೀಸ್ ದೂರು ನೀಡಲಾಗಿದೆ. ಮಸೀದಿಯ ಹೊರಗೆ ನಿಂತಿದ್ದ ಜನರನ್ನು ನಿಂದಿಸಿದ ಆರೋಪ ಕೂಡ ಮಾಡಲಾಗಿದೆ.
ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಠಾಣೆ ಪೊಲೀಸರು ಸುರೇಶ್, ವಿನಯ್, ಸುಭಾಷ್, ರಂಜಿತ್, ಧನಂಜಯ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.