ಮಂಗಳೂರು : ‘ಪರಿವರ್ತನ ಬದಲಾವಣೆಯನ್ನು ಅಪ್ಪಿಕೊಳ್ಳಿ, ಭವಿಷ್ಯವನ್ನು ರೂಪಿಸಿ’ ಎಂಬ ಧ್ಯೇಯವಾಕ್ಯದಡಿ ಭಾರತದ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ಐಸಿಎಐ) ಶೈಕ್ಷಣಿಕ ಮಂಡಳಿಯು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಿರುವ ಸಿ.ಎ ವಿದ್ಯಾರ್ಥಿಗಳ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದರು.

ರಾಷ್ಟ್ರ ನಿರ್ಮಾಣದಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಗಳ ಪಾತ್ರ ಮಹತ್ವವಿದ್ದು ಇದರ ಕುರಿತು ಸಂಸದರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.


























