ರಾಯಚೂರು : ಯುವತಿ ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸಾವನ್ನಪ್ಪಿರುವ ವ್ಯಕ್ತಿಯನ್ನು ರಾಯಚೂರು ತಾಲೂಕಿನ ಗಧಾರ್ ಗ್ರಾಮದ ಹನುಮೇಶ್( 21) ಎಂದು ಗುರುತಿಸಲಾಗಿದೆ.
ಹನುಮೇಶ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ನಗರದ ನವಯುಗ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಮದುವೆಗೆ ಯುವತಿ ಮನೆಯವರು ನಿರಾಕರಿಸಿದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಬಿದ್ದ ಯುವಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹನುಮೇಶ್ ಸಾವನ್ನಪ್ಪಿರುವ ಸುದ್ದಿ ತಿಳಿದು ಆಸ್ಪತ್ರೆಯ ಬಳಿ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























