ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಬಾಲಕೃಷ್ಣ ಡಿ.ಬಿ ಹಾಗೂ ಪದಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಿದರು.

ಈ ವೇಳೆ ಸಂಸದರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನವನ್ನು ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ರಕ್ಷಿತ್ ಪುತ್ತಿಲ ಮತ್ತು ಸಾರಿಕಾ ಸುರೇಶ್ ಉಪಸ್ಥಿತರಿದ್ದರು.




























