ಬಂಟ್ವಾಳ: ಬಂಟ್ವಾಳ ಪುರಸಭಾಧ್ಯಕ್ಷರಾಗಿ ಆಯ್ಕೆಗೊಂಡ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಜೆಸಿಂತಾ ಡಿಸೋಜ ಅವರ ಪದಗ್ರಹಣ ಕಾರ್ಯಕ್ರಮ ನವೆಂಬರ್ 18 ರಂದು ಬಂಟ್ವಾಳ ಪುರಸಭೆಯಲ್ಲಿ ನಡೆಯಿತು
ಬಂಟ್ವಾಳ ಪುರಸಭಾ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೂತನ ಅಧ್ಯಕ್ಷರು ಉಪಾಧ್ಯಕ್ಷರಿಗೆ ಶುಭ ಹಾರೈಸಿ ಮಾತನಾಡಿ ಮೀಸಲಾತಿಯನ್ನು ಮಾರ್ಪಾಡು ಮಾಡುವ ಮೂಲಕ ಅಧಿಕಾರ ಶಾಹಿಗಳು ಅಧಿಕಾರ ಮಾಡಿದ್ದರಿಂದ ಪುರಸಭೆಯ ಅಭಿವೃದ್ಧಿ ಕಾರ್ಯಗಳು ಬದಿಗೆ ಸರಿದಿದ್ದು, ನೂತನ ಅಧ್ಯಕ್ಷ -ಉಪಾಧ್ಯಕ್ಷರು ಸವಾಲುಗಳನ್ನು ಎದುರಿಸಿ ಬಂಟ್ವಾಳ ಪುರಸಭೆಯನ್ನು ಕ್ರಿಯಾಶೀಲವಾಗಿ ಮುನ್ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಶ್ರೀಮತಿ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ,ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪುರಸಭಾ ಸದಸ್ಯರು ತಾಲೂಕು ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.