ತುಮಕೂರು : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ವರ್ಷಿಣಿ (19) ಮೃತ ವಿದ್ಯಾರ್ಥಿನಿ.
ವರ್ಷಿಣಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು.
ವರ್ಷಿಣಿ ತನ್ನ ಊರಿನಿಂದ ಕಾಲೇಜಿಗೆ ಪ್ರತಿದಿನ ರೈಲಿನಲ್ಲಿ ಪ್ರಯಾಣ ಮಾಡ್ತಿದ್ದಳು. ನಿನ್ನೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ವರ್ಷಿಣಿಗೆ ಕೆಲ ಆರೋಗ್ಯ ಸಮಸ್ಯೆ ಇತ್ತು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.