ಮಂಗಳೂರು : ನಗರದ ಪಿವಿಎಸ್ ಬಳಿ ಗುರುವಾರ ನಡೆದ ಬಿಜೆಪಿ ಪ್ರತಿಭಟನೆ ಸಂದರ್ಭ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಪರ್ಸನ್ನು ಕಳ್ಳ ಎಗರಿಸಿದ್ದಾನೆ.
ಪ್ರತಿಭಟನೆ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದ್ದಾರೆ. ಈ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿದ್ದ ಕಳ್ಳ ಸಿವಿಲ್ ಡ್ರೆಸ್ನಲ್ಲಿದ್ದ ಪೊಲೀಸ್ ಸಿಬ್ಬಂದಿ ಪರ್ಸ್ ಎಗರಿಸಿದ್ದಾನೆ.
ಸ್ಥಳದಲ್ಲಿದ್ದ ಮಾಧ್ಯಮದವರ ವೀಡಿಯೋದಲ್ಲಿ ಈ ದೃಶ್ಯ ಸೆರೆಯಾಗಿದೆ. ಆರೋಪಿಯ ಪತ್ತೆಗಾಗಿ ಶೋಧ ನಡೆಯುತ್ತಿದೆ.

























