ಶಿವಮೊಗ್ಗ : ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ ನಡೆದಿದೆ.
ಬಳ್ಳಾರಿ ಮೂಲದ ವಿನೋದ್(26) ನಾಪತ್ತೆ ಆಗಿರುವ ಯುವಕ.
ಫಾಲ್ಸ್ಗೆ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ. ನಾಪತ್ತೆಯಾದ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನಂತೆ. 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ಅಬ್ಬೆ ಫಾಲ್ಸ್ಗೆ ತೆರಳಿದ್ದರು. ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ.
ನಾಪತ್ತೆಯಾಗಿರುವ ವಿನೋದ್ಗಾಗಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


























