ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮೂರು ದಿನ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ.
ಜೂನ್ 29ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಹಾಗೂ ಕರಾವಳಿ ಪ್ರದೇಶಗಳಿಗೆ ಇಂದು ಕೂಡ ಆರೆಂಜ್ ಅಲರ್ಟ್ ಮುಂದುವರಿಕೆ ಮಾಡಲಾಗಿದೆ.


























