ಮಂಗಳೂರು : ಭಾರೀ ಮಳೆಯಿಂದಾಗಿ ಉಳ್ಳಾಲದ ಮದನಿ ನಗರದಲ್ಲಿ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.

ಮಳೆಗಾಲದ ಸಂದರ್ಭದಲ್ಲಿ ಸ್ಥಳೀಯಾಡಳಿತ, ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರಕೃತಿ ವಿಕೋಪ ದುರ್ಘಟನೆಗಳಿಂದ ಅಮಾಯಕ ಜೀವಗಳ ರಕ್ಷಣೆಯ ಬಗ್ಗೆ ಆದಷ್ಟೂ ಗಮನಹರಿಸಬೇಕಾಗಿರುವುದು ಅತ್ಯಗತ್ಯ ಎಂದು ಅವರು ಹೇಳಿದರು.




























