ಕಾಸರಗೋಡು : ಗಡಿಭಾಗ ಕಾಸರಗೋಡಿನಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಸಿದ್ಧವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಮಳೆಯಿಂದಾಗಿ ಮಧುವಾಹಿನಿ ನದಿ ತುಂಬಿ ತುಳುಕಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ತುಂಬಿಕೊಂಡಿದೆ.
ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿದ್ದು, ದ್ವೀಪದಂತೆ ಗೋಚರವಾಗುತ್ತಿದೆ. ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


























