ಕಡಬ : ಬಸ್ಸಿಗೆ ಜೀಪ್ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಜಂಕ್ಷನ್ ನಲ್ಲಿ ನಡೆದಿದೆ.

ಪುತ್ತೂರಿನಿಂದ-ಶಾಂತಿಮೊಗರು ಆಗಿ ಮರ್ದಾಳ ಜಂಕ್ಷನ್ ಗೆ ಆಗಮಿಸಿದ ಬಸ್ ತಿರುಗುತ್ತಿದ್ದು, ಕೊಂಬಾರು ಭಾಗದಿಂದ ಬಂದ ಜೀಪ್ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಜೀಪಿನ ಮುಂಭಾಗಕ್ಕೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕಡಬ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


























