ಬೆಳ್ತಂಗಡಿ : ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ವರ್ಶಿಸಿದ ಪರಿಣಾಮ ಯುವತಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಜೂ.27 ರಂದು ಸಂಜೆ ಸಂಭವಿಸಿದೆ.
ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ.

ಪ್ರತೀಕ್ಷಾ ಅವರು ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ ತಂದೆ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ತಂದೆಗೂ ವಿದ್ಯುತ್ ಶಾಕ್ ಹೊಡೆದಿದ್ದು, ಪುತ್ರಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.
ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಅದು ನೀರಿಗೆ ಪ್ರವಾಹಿಸಿದೆ. ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ಬಳಿಕ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಪ್ರತೀಕ್ಷಾ ಶೆಟ್ಟಿ ಅದಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

























