ಬೆಳ್ತಂಗಡಿ : ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು-ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ-ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.

ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲಕ ಹಾಗೂ ಉದ್ಯಮಿಯಾಗಿದ್ದರು.


























