ವಿಜಯಪುರ : ಅಂದರ್ ಬಾಹರ್ ಇಸ್ಪೀಟ್ ಆಟ ಆಡುವಾಗ ಪೊಲೀಸರು ದಾಳಿ ಮಾಡಿದ್ದಾರೆ. ಆಗ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಏಳೆಂಟು ಜನರು ತೆಪ್ಪದಲ್ಲಿ ಮುಗುಚಿ ಬಿದ್ದಿರೋ ಘಟನೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ವೆಲ್ ಬಳಿ ನಡೆದಿದೆ.
ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಅದರಲ್ಲಿ ಅದೃಷ್ಟವಶಾತ್ ಓರ್ವ ನದಿಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂತಿ ಜಾಕ್ವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಈ ಘಟನೆ ನಡೆದಿದೆ. ತೆಪ್ಪದಲ್ಲಿ ತೆರಳಿದವರು ಕೊಲ್ಹಾರ ಹಾಗೂ ಬಳೂತಿ ಗ್ರಾಮದವರು. ವ್ಯಕ್ತಿಗಳ ಬಗ್ಗೆ ಮಾಹಿತಿ ಸಿಗಬೇಕಿದೆ.
ಘಟನಾ ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























