ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಕೇರಳದವರ ಸಹಿತ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ವಶಕ್ಕೆ ಪಡೆದವರಲ್ಲಿ ಸ್ಥಳೀಯರು ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಇಲಾಖೆಯಿಂದ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ.
ಜೂ. 21ರಂದು ರಾತ್ರಿ ಸುಮಾರು ಹತ್ತು ಮಂದಿ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ಚೂರಿಯಿಂದ ಇರಿದು ಒಂದೂವರೆ ಲಕ್ಷ ರೂ ನಗದು, ಚಿನ್ನಾಭರಣ ಸೇರಿದಂತೆ ಸುಮಾರು ಒಂಬತ್ತು ಲ.ರೂ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ್ದರು.


























