ಪುತ್ತೂರು : ರಾಜ್ಯ ಸರಕಾರ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ,
ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ಅವರ ನೇತೃತ್ವದಲ್ಲಿ ಮನವಿ ನೀಡಲಾಯಿತು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷೆ ಮೀನಾಕ್ಷಿ ಮಂಜುನಾಥ್, ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶೋಧ ಕೆ ಗೌಡ, ನಗರ ಸಭಾ ಸದಸ್ಯೆ ಗೌರಿ ಬನ್ನೂರು, ನಿಕಟಪೂರ್ವ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜಯಂತಿ ನಾಯಕ್,ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಆಶಾ ಭಗವಾನ್, ಸುಮತಿ, ಸರೋಜಿನಿ, ಸುಜಾತ, ಸ್ವರ್ಣಲತಾ ಹೆಗ್ಡೆ ಈ ವೇಳೆ ಉಪಸ್ಥಿತರಿದ್ದರು.

























