ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಭೀಕರವಾಗಿ ಕೊಲೆಗೈದು ಅರಣ್ಯ ಪ್ರದೇಶದಲ್ಲಿ ಶವವನ್ನು ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
























