ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ.
ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ ಮೃತ ಯುವಕ.
ಪ್ರಣಮ್ ಮೆಡಿಕಲ್ ರೆಪ್ರಸೆಂಟಿವ್ ಆಗಿದ್ದು, ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನಡುವೆ ಕೊಲ್ಪೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಣಮ್ ರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.



























