ವಿಟ್ಲ : ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಿಧನರಾದ ಮೂಡಂಬೈಲು ನಿವಾಸಿ ರಾದೀಪ್ ಪೂಜಾರಿ ರವರ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು.

ವಿಟ್ಲ ಸಮೀಪದ ಬೊಳಂತಿಮೊಗರಿನಲ್ಲಿ ನಡೆದ ಕೆಸರ್ಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಬಳಿಕ ರಾದೀಪ್ ಪೂಜಾರಿ ರವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.



























