ಬಂಟ್ವಾಳ : ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ 7.8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದ 6 ಕುಟುಂಬಗಳನ್ನು ತಾಲೂಕು ಆಡಳಿತ ಸ್ಥಳಾಂತರ ಮಾಡಿದೆ.
ನದಿ ಪಾತ್ರದ ಗ್ರಾಮಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ.
ಬಂಟ್ವಾಳದಲ್ಲಿ ನದಿ ನೀರಿನ ಅಪಾಯಕಾರಿ ಮಟ್ಟ 8.5 ಮೀ. ಆಗಿದ್ದು, ನಿನ್ನೆ ಸಂಜೆಯಿಂದ ನೀರಿನ ಮಟ್ಟ ಏರುತ್ತಲೇ ಇದೆ. ತಾಲೂಕಿನ ನದಿ ಪಾತ್ರದ ಗ್ರಾಮಗಳಾದ ಸರಪಾಡಿ, ಬರಿಮಾರು, ಮಣಿನಾಲ್ಕೂರು ಗ್ರಾಮಗಳಲ್ಲಿ ಕೆಲವೊಂದು ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.


























