ಮಡಿಕೇರಿ : ಭಾರೀ ಮಳೆ, ಭೂಕುಸಿತ ಹಿನ್ನೆಲೆ ಮಂಗಳೂರು – ಮಡಿಕೇರಿ ರಸ್ತೆಯಲ್ಲಿ ವಾಹನ ಸಂಚಾರ ರಾತ್ರಿ ವೇಳೆ ಬಂದ್ ಮಾಡಲಾಗಿದೆ.
ಮಡಿಕೇರಿಯಿಂದ ಸಂಪಾಜೆವರೆಗೆ ಎಲ್ಲಾ ಮಾದರಿ ವಾಹನ ಬಂದ್ ಆಗಲಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಕೋರಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಜು. 18ರಿಂದ ಜು.22ರವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಗೇಟನ್ನು ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಮಡಿಕೇರಿಯ ಟೋಲ್ ಗೇಟ್ ನಲ್ಲಿಯೂ ಬ್ಯಾರಿಕೇಡ್ ಇಟ್ಟು ರಾತ್ರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಜುಲೈ 22 ರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿ ಇರುತ್ತದೆ. ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.
ಮಡಿಕೇರಿ ಸಂಪಾಜೆ ಮಾರ್ಗದ ಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ನಡೆಯುತ್ತಿದೆ. ಆ ಭಾಗದಲ್ಲಿ ಗುಡ್ಡಕುಸಿತ ಸಾಧ್ಯತೆ ಇದೆ. ಈ ಹಿನ್ನೆಲೆ ರಸ್ತೆಯಲ್ಲಿ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
