ಕೊಡಗು : ಪತಿಯೋರ್ವ ತಾಳಿ ಕಟ್ಟಿದ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ವಿರಾಜಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಬೆಟೋಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಶಿಲ್ಪ(36) ಹತ್ಯೆಯಾದ ಮಹಿಳೆ. ಪತಿ ಬೋಪಣ್ಣ ಕೈಯಾರೆ ಶಿಲ್ಪ ಸಾವನ್ನಪ್ಪಿದ್ದಾರೆ. ಹತ್ಯೆ ಬಳಿಕ ಪತಿ ಬೋಪಣ್ಣ ಕೋವಿಯೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ.
ಮನೆಯಲ್ಲಿ ಜಗಳವಾಡಿಕೊಂಡು ಬಳಿಕ ಶಿಲ್ಪಳನ್ನು ಪತಿ ಬೋಪಣ್ಣ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























