ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.