ಪುತ್ತೂರು : ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬುಳೇರಿಕಟ್ಟೆ ಎಂಬಲ್ಲಿ ನಡೆದಿದೆ.
ಬುಳೇರಿಕಟ್ಟೆ ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು (58) ಮೃತ ವ್ಯಕ್ತಿ.
ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಜಗನ್ಮೋಹನ್ ರೈ ಅವರು ನೀರಿಗೆ ಬಿದ್ದು ಸಾವನ್ನಪ್ಪಿರುವ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಘಟನಾ ಸ್ಥಳದಲ್ಲಿ ಜಮಾಯಿಸಿದ್ದರು.