ಉಪ್ಪಿನಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.
ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗಂಡಿಬಾಗಿಲು ನಿವಾಸಿ ಮಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ.
ಸ್ನೇಹಿತರೊಂದಿಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ವೇಳೆ ತಲೆತಿರುಗಿ ಬಿದ್ದಿದ್ದರು ಕೊಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದರು.
ಮೃತರು ಅಜ್ಜ ,ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.