ಬಂಟ್ವಾಳ : ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವೈಯಕ್ತಿಕ ವಿಚಾರವಾಗಿ ನಡೆದ ಹೊಡೆದಾಟ ಚೂರಿ ಇರಿತದ ಮೂಲಕ ಕೊನೆಗೊಂಡಿದೆ.
ಬಿಸಿರೋಡಿನ ಹಿಂದೂ ಸಂಘಟನೆಯ ಯುವಕರ ತಂಡ ಹಾಗೂ ಬಂಟ್ವಾಳ ಹಿಂದೂ ಸಂಘಟನೆಯ ಯುವಕರ ತಂಡದ ನಡುವೆ ನಡೆದ ಗಲಾಟೆ ಚೂರಿ ಇರಿತದಲ್ಲಿ ಅಂತ್ಯಗೊಂಡಿದೆನ್ನಲಾಗಿದೆ.
ಘಟನೆಯಲ್ಲಿ ಇತ್ತಂಡಗಳ ಮೂವರು ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಪೃಥ್ವಿರಾಜ್, ವಿನಿತ್ ಹಾಗೂ ಪುಷ್ಪರಾಜ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಯಾವ ಕಾರಣಕ್ಕಾಗಿ ಗಲಾಟೆ ನಡೆದಿದೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.