ಮಂಗಳೂರು : ಬಾಡಿಗೆ ಮನೆಯಲ್ಲಿದ್ದ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು, ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು
ಆ. 6 ರಂದು ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ತಿಳಿಸಿದ್ದು, ಈ ವೇಳೆ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಕಂಡುಬಂದಿರುತ್ತದೆ ಎಂದು ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದ್ದು, ಕೂಡಲೇ ಬಾಲಕಿಯ ತಾಯಿಯು ಹನುಮಂತರಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ ಮೇರೆಗೆ ಹನುಮಂತ ರವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಅಪರಾಧ ಕ್ರಮಾಂಕ ನಂಬ್ರ 87/2024 ಕಲಂ 103 ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಅನುಪಮ್ ಅಗರವಾಲ್ ಪೊಲೀಸ್ ಆಯುಕ್ತರು ಮಂಗಳೂರು ನಗರ, ದಿನೇಶ್ ಕುಮಾರ್, ಉಪಪೊಲೀಸ್ ಆಯುಕ್ತರು ಅಪರಾಧ ಮತ್ತು ಸಂಚಾರ, ಉತ್ತರ ಉಪ ವಿಭಾಗದ ಅಧಿಕಾರಿಗಳು ಮತ್ತು ಪಣಂಬೂರು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ.
https://youtu.be/c8j9I_Kdkbc?si=NS9QJSfq9nijCjFv