ಕಡಬ : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಡಬ ತಾಲೂಕಿನ ಮರ್ಧಾಳ ಸಮೀಪದ ನಿವಾಸಿಗಳಾದ ನಂದನ್ ಹಾಗೂ ಮಾಹಿಝ್ ಬಂಧಿತ ಆರೋಪಿಗಳು.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಪ್ರತ್ಯೇಕ 2 ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.