ಸುಬ್ರಹ್ಮಣ್ಯ : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.
ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತ ಯುವಕ.
ಅಶೋಕ್ ಆ. 4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು. ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎನ್ನುವಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಆಂಬ್ಯುಲೆನ್ಸ್‌ನ ಅಬ್ದುಲ್ ರಜಾಕ್ (ಅಚ್ಚು), ಚಿದಾನಂದ ಗೂನಡ್ಕ, ಮುತ್ತಪ್ಪನ್ ಆ್ಯಂಬ್ಯುಲೆನ್ಸ್‌ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು. ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.