ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದು, ವೀಡಿಯೋ ವೈರಲ್ ಆಗಿದೆ.
ಮುಡಾ ಕೇಸ್ನಲ್ಲಿ ಸಿಎಂ ರಾಜೀನಾಮೆ ಕೊಡುತ್ತಾರಾ ಎಂದು ಕಾರ್ಯಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶೋಭಾ ಕರಂದ್ಲಾಜೆ ಅವರು ಮುಡಾ ಪ್ರಕರಣದಲ್ಲಿ ಎಲ್ಲಾ ಪಕ್ಷದವರು ಇದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೇಂದ್ರ ಸಚಿವೆ ಈ ಬಗ್ಗೆ ಮಾತನಾಡಿದ್ದು, ಇದೀಗ ವೀಡಿಯೋ ವೈರಲ್ ಆಗುತ್ತಿದೆ.


























