ವಿಟ್ಲ : ಕುದ್ದುಪದವು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಜಾಮೀನು ಮಂಜೂರಾಗಿದೆ.
ಕೆಲ ದಿನಗಳ ಹಿಂದೆ ಕುದ್ದುಪದವು ಎಂಬಲ್ಲಿ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಅಶ್ರಫ್ ಎಂಬಾತ ಲೈಂಗಿಕ ದೌರ್ಜನ್ಯ ನೀಡಿದ್ದ ಎಂದು ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಹಿಂದೂಪರ ಸಂಘಟನೆಗಳು ಭಾರೀ ಖಂಡನೆ ವ್ಯಕ್ತಪಡಿಸಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಬಳಿಕ ವಿಟ್ಲ ಪೊಲೀಸರು ಆರೋಪಿಯನ್ನು ಆ.14ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಮಂಗಳೂರು ಪೋಕ್ಸೋ ವಿಶೇಷ ನ್ಯಾಯಾಲಯ ಆರೋಪಿ ಜಾಮೀನು ಅರ್ಜಿ ಪರಿಶೀಲಿಸಿದ್ದು, 6 ದಿನದಲ್ಲಿ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರ ನ್ಯಾಯವಾದಿಗಳಾದ ಅಶ್ರಪ್ ಅಗ್ನಾಡಿ, ಇರ್ಷಾದ್ ಸಖಾಫಿ ಮುಡಿಪು ಮತ್ತು ಸಲೀಲಾ ವಾದಿಸಿದ್ದರು.



























