ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.12 ರಂದು ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಥಳೀಯ ನಿವಾಸಿ ಮುಝಂಬಿಲ್ ಮೃತ ಯುವಕ.
ಅಪಘಾತದಲ್ಲಿ ಬೈಕ್ ಸವಾರ ಮುಝಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿತ್ತು.



























