ಕಾರ್ಕಳ : ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.
ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಸಂಜೆ 7 ಗಂಟೆಯ ವೇಳೆ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ.
ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದ ಯುವತಿಗೆ ಅಲ್ತಾಫ್ ಎಂಬಾತ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಎನ್ನಲಾಗಿದೆ.
ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಅಲ್ತಾಫ್ ಹಾಗೂ ಇಬ್ಬರ ವಿರುದ್ಧ ರೇಪ್ & ಕಿಡ್ನಾಪ್ ಕೇಸ್ ದಾಖಲಾಗಿದೆ.
ಅಲ್ತಾಫ್ ಮತ್ತು ಸಹಕರಿಸಿದ ಮತ್ತೊಬ್ಬನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇನ್ನೊಬ್ಬನ ಪತ್ತೆಗೆ ಬಲೆ ಬೀಸಿದ್ದಾರೆ.


























