ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ರೀ ಗಣೇಶೋತ್ಸವದ ಅಂಗವಾಗಿ ಬೃಹತ್ ಕೇಸರಿ ಧ್ವಜವನ್ನು ಅಳವಡಿಸಲಾಯಿತು.

ಹಿರಿಯ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.

ಸಂತ ಫಿಲೋಮಿನಾ ಕಾಲೇಜಿನ ಹೊರಗಡೆ ಫಿಲೋನಗರ ವಠಾರದಲ್ಲಿ ಸುಮಾರು 41 ವರುಷಗಳಿಂದ ವಿಜೃಂಭಣೆಯಿಂದ ಗಣೇಶೋತ್ಸವ ನಡೆಸಲಾಗುತ್ತಿದ್ದು, ಈ ಬಾರಿ 42ನೇ ವರುಷದ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ.



























