ವಿಟ್ಲ : ಗುಡ್ಡ ಮನೆ ಮೇಲೆ ಕುಸಿದ ಘಟನೆ ವಿಟ್ಲದ ಕುರುಂಬಳ ಎಂಬಲ್ಲಿ ನಡೆದಿದೆ.
ಮನೆ ಮಂದಿ ಅಪಾಯದಿಂದ ಪಾರಾಗಿದ್ದು, ಮನೆಗೆ ಹಾನಿಯಾಗಿದೆ.
ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದು, ಅವರು ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಗೋಪಾಲ್ ನಾಯ್ಕ್, ಸಿಬ್ಬಂದಿಗಳಾದ ಅರುಣಾ, ರವಿ ಭೇಟಿ ನೀಡಿದರು.


























