ಪುತ್ತೂರು : ರಾಜ್ಯ ಸರಕಾರದ ಹಗರಣದ ವಿರುದ್ಧ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿ ಯುವಮೋರ್ಚಾ ಘಟಕ ಪುತ್ತೂರು ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ನಾಳೆ (ಆ.28) ದರ್ಬೆ ಸರ್ಕಲ್ ಬಳಿ ಪ್ರತಿಭಟನೆ ನಡೆಯಲಿದೆ.
ಮುಖ್ಯ ಭಾಷಣಕಾರರಾಗಿ ಮಂಗಳೂರು ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಆಗಮಿಸಲಿದ್ದಾರೆ.
ಮಾಜಿ ಶಾಸಕರುಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿರಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.


























